ಸ್ಥಳೀಯ ಸುದ್ದಿಗಳು

ಕುವೆಂಪು ವಿವಿ ವೇಳಪಟ್ಟಿ ಮತ್ತು ಶುಲ್ಕ ಹೆಚ್ಚಳದ ವಿರುದ್ಧ ಎಬಿವಿಪಿ ಸಾಗರದಲ್ಲಿ ಪ್ರತಿಭಟನೆ

ಸುದ್ದಿಲೈವ್. ಕಾಂ/ಸಾಗರ

ಕುವೆಂಪು ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ವೇಳಾಪಟ್ಟಿ  ಮತ್ತು ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ಇಂದು ಸಾಗರ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಎನಿವಿಪಿ ಸಾಗರ ಶಾಖೆ ಪ್ರತಿಭಟನೆ ನಡೆಸಿದೆ.

ಕುವೆಂಪು ವಿಶ್ವವಿದ್ಯಾಲಯವು ದಿನಾಂಕ 18-08-2022ರಂದು ನೂತನ ಶೈಕ್ಷಣಿಕ ವೇಳಾಪಟ್ಟಿಯನ್ನು ಪ್ರಕಟಿಸಿದ್ದು ಇದರ ಅನ್ವಯ ಪದವಿ 4ನೇ ಸೆಮಿಸ್ಟರ್ ನ ವಿದ್ಯಾರ್ಥಿಗಳಿಗೆ ದಿನಾಂಕ 30-08-2022 ರಂದು ಪ್ರಸಕ್ತ ವರ್ಷದ ಸೆಮ್‌ನ ಕೊನೆಯ ದಿನವೆಂದು ಪ್ರಕಟಿಸಿ, ದಿನಾಂಕ 07-09-2022 ರಿಂದ ಪರೀಕ್ಷೆಗಳನ್ನು ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಪ್ರಸಕ್ತ ಸಾಲಿನ ಸೆಮ್‌ನ ವಿದ್ಯಾರ್ಥಿಗಳಿಗೆ ತರಗತಿಗಳು ಬಹುತೇಕ ಜೂನ್ ಇಂದ ಶುರುವಾಗಿರುವುದರಿಂದ ನೂತನ ಆದೇಶದ ಅನ್ವಯ ಈ ಸೆಮ್‌ನ ವಿದ್ಯಾರ್ಥಿಗಳಿಗೆ ಅಗತ್ಯಕ್ಕಿಂತ ಕಡಿಮೆ ತರಗತಿ ಅವಧಿಗಳಾಗುವುದರಿಂದ ಪಾಠ-ಪ್ರವಚನಗಳು ಸಂಪೂರ್ಣವಾಗದೆ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೊಂದರೆ ಅನುಭವಿಸುವಂತಾಗಿದೆ. ಇರಿಂದರಿಂದ ಒತ್ತಡದಲ್ಲಿ ಪರೀಕ್ಷೆ ಎದುರಿಸುವಂತಾಗಿದೆ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

2ನೇ ಸೆಮ್‌ನ ವಿದ್ಯಾರ್ಥಿಗಳು ಸಹ ಇದೇ ರೀತಿ ಸಮಸ್ಯೆ ಎದುರಿಸುತ್ತಿದ್ದಾರೆ ಈ ನಿಟ್ಟಿನಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪದವಿ ವಿದ್ಯಾರ್ಥಿಗಳಿಗೆ ನೂತನವಾಗಿ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯನ್ನು ಹಿಂತೆಗೆದುಕೊಂಡು ಪರಿಷ್ಕರಿಸಿ ವಿದ್ಯಾರ್ಥಿಗಳ ಹಿತ ಕಾಪಾಡುವ ನಿಟ್ಟಿನ ವೇಳಾಪಟ್ಟಿಯನ್ನು ರಚಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌, ಸಾಗರ ಶಾಖೆಯು ಮನವಿಯಲ್ಲಿ ಆಗ್ರಹಿಸಿದೆ.

ಇದ ಅಲ್ಲದೇ NEP ಮೊದಲನೇ ವರ್ಷದ B.Com,BCA,BBA,BSW ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಬಹಳ ಏರಿಕೆ ಮಾಡಿದೆ ಈ ನಿಟ್ಟಿನಲ್ಲಿ ಈಗಾಗಲೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ನ ಪ್ರತಿಭಟನೆಗೆ ಮಣಿದು ಕುವೆಂಪು ವಿವಿಯು 300ರೂ ಗಳಷ್ಟನ್ನು ಕಡಿಮೆ ಮಾಡಿದ್ದರೂ ಸಹ ಇನ್ನೂ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌,  ಆಗ್ರಹಿಸಿದೆ.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button