ಸುದ್ದಿ

ಕುವೆಂಪು ವಿವಿಯ ಪರಿಷ್ಕೃತ ಆದೇಶ

ಸುದ್ದಿಲೈವ್. ಕಾಂ/ಶಂಕರಘಟ್ಟ

ಪರೀಕ್ಷಾ ಶುಲ್ಕ ಕಡಿಮೆ ಮಾಡುವುದು ಮತ್ತು ಪರೀಕ್ಷಾ ಶುಲ್ಕ ಪಾವತಿಸಲು ದಿನಾಂಕ ವಿಸ್ತರಿಸುವಂತೆ ಆಗ್ರಹಿಸಿ ಎನ್ ಎಸ್ ಯು‌ಐ ನಡೆಸಿದ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ.

ಕುವೆಂಪು ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕವನ್ನು ಹೆಚ್ಚಳವಾಗಿದ್ದರ ವಿರುದ್ಧ ನಡೆಸಿದ ಪ್ರತಿಭಟನೆಗೆ ಯಶಸ್ವಿಯಾಗಿದೆ  ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಪ್ರಸ್ತುತ ಶುಲ್ಕ ಹೊರೆಯಾಗುತ್ತಿದೆ. ರಾಜ್ಯದ ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ಪರೀಕ್ಷಾ ಶುಲ್ಕ ಕಡಿಮೆ ಇದೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಕುವೆಂಪು ವಿವಿಯಲ್ಲಿ ದುಬಾರಿ ಪರೀಕ್ಷಾ ಶುಲ್ಕ ವಸೂಲು ಮಾಡುತ್ತಿರುವುದನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸಿತ್ತು.

ಕೂಡಲೇ ಮಾನ್ಯ ಕುಲಸಚಿವರು ಹೆಚ್ಚಿಸಿರುವ ಪರೀಕ್ಷಾ ಶುಲ್ಕವನ್ನು ಕಡಿಮೆ ಮಾಡಬೇಕು. ಹಾಗೆಯೇ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದರಿಂದ ಬಹುತೇಕ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸದೇ ಇರುವುದರಿಂದ ಪರೀಕ್ಷಾ ಶುಲ್ಕ ಪಾವತಿಸಲು ಕಾಲಾವಕಾಶ ಬೇಕಾಗಿದ್ದು, ಪರೀಕ್ಷಾ ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಿಸಬೇಕೆಂದು ಈ ಮೂಲಕ ಆಗ್ರಹಿಸಲಾಗಿತ್ತು.

ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದಲ್ಲಿ ಎನ್.ಎಸ್.ಯು.ಐ. ವತಿಯಿಂದ ನಡೆಸುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವದು ಎಂದು ಈ ಮೂಲಕ ಎಚ್ಚರಿಸುತ್ತು. ಈ ಬಗ್ಗೆ ವಿಶ್ವ ವಿದ್ಯಾಲಯದ ಕುಲಪತಿಗಳು ಈ ಕೆಳ ಕಂಡಂತೆ ಆದೇಶಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಕುಲಪತಿಗಳು 4ದಿನಗಳ ಕಾಲ ಪರೀಕ್ಷಾ ಶುಲ್ಕವನ್ನು ಕಟ್ಟಲು ದಿನಾಂಕವನ್ನು ವಿಸ್ತರಿಸಲಾಗುವುದಾಗಿ ತಿಳಿಸಿದ್ದರು ಅದರಂತೆ ಆದೇಶಿಸಲಾಗಿದೆ. IMG_20220912_205356

ಈ ಸಂದರ್ಭದಲ್ಲಿ ಎನ್ ಎಸ್ ಯುಐ ಜಿಲ್ಲಾ ಅಧ್ಯಕ್ಷ ವಿಜಯ್ ಕಾರ್ಯಾಧ್ಯಕ್ಷ ರವಿ,
ಭದ್ರಾವತಿ ತಾಲ್ಲೂಕು ಉಪಾಧ್ಯಕ್ಷ ಕೀರ್ತಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button