ಸ್ಥಳೀಯ ಸುದ್ದಿಗಳು

ಸೆ.17 ರಂದು ಗಿನ್ನಿಸ್ ರೆಕಾರ್ಡ್ ಗಾಗಿ ಯೋಗಥಾನ್-2022-ನೀವು ಭಾಗವಹಿಸಬೇಕೆ?

ಸುದ್ದಿಲೈವ್. ಕಾಂ/ಶಿವಮೊಗ್ಗ

ಯೋಗದಲ್ಲಿ ಗಿನ್ನಿಸ್ ರೆಕಾರ್ಡ್ ಮಾಡಲು ರಾಜ್ಯದಲ್ಲಿ ಚಿಂತಿಸಲಾಗಿದ್ದು ಈ ಬಗ್ಗೆ ಸೆ.17 ರಂದು ರಾಜ್ಯಾದ್ಯಂತ 5 ಲಕ್ಷ ಜನ ಸೇರಿ ಯೋಗವನ್ನ ಅಭ್ಯಾಸ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯೋಗಥಾನ್ 2022 ಸರ್ಕಾರಿ ಕಾರ್ಯಕ್ರಮವಾಗಿದ್ದು, ಯೋಗವನ್ನ ಯುವ ಜನರಲ್ಲಿ ಪ್ರಚುರ ಪಡಿಸಿ ಹೊಸ ಗಿನ್ನಿಸ್ ದಾಖಲೆ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಆಜಾದಿ ಕಾ ಅಮೃತ್ ಮಹೋತ್ಸವದ ಅಂಗವಾಗಿ ಈ ಕಾರ್ಯಕ್ರಮ ಜರುಗಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಆಯುಷ್ ಇಲಾಖೆ, ಆಯುಷ್ ಟಿ.ವಿ.ಮಿರಾಕಲ್ ಡ್ರಿಂಕ್ಸ್, ಕೆಂಎಂಎಫ್ ಸಹಯೋಗದಲ್ಲಿ ನಡೆಯಲಿದೆ ಎಂದರು.

ಇದರ ಅಂಗವಾಗಿ ಶಿವಮೊಗ್ಗದಲ್ಲಿ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಯೋಗಾಥಾನ್ ನಡೆಯಲಿದ್ದು ಈಗಾಗಲೇ 25 ಸಾವಿರ ಜನರು ರಿಜಿಸ್ಟ್ರೇಷನ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಮತ್ತೆ ಶಾಲೆಗಳಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಲು ಸೂಚಿಸುತ್ತಿದ್ದೇವೆ ಎಂದರು.

15 ನಿಮಿಷದ ಯೋಗ ನಡೆಯಲಿದೆ. 20 ಭಂಗಿಯಲ್ಲಿಯೋಗ ನಡೆಯಲಿದೆ. ಆಸಕ್ತರು ಆನ್ ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. register@yogathon2022.com ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದರು.

ಇದುವರೆಗೂ ಗುಜರಾತ್ ನಲ್ಲಿ 1.52 ಲಕ್ಷ ಜನ ಯೋಗಥಾನ್ ನಲ್ಲಿ ಭಾಗಿಯಾಗಿ ಗಿನ್ನಿಸ್ ರೆಕಾರ್ಡ್ ಮಾಡಿದ್ದರು. ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಈ ಗಿನ್ಬಿಸ್ ರೆಕಾರ್ಡ್ ನಡೆಯಲಿದೆ ಎಂದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button