ರಾಜಕೀಯ

ಸಿ.ಟಿ ರವಿ ವಿರುದ್ದ ಕಾಗ್ರೆಸ್ ಪ್ರತಿಭಟನೆ

ಸುದ್ದಿಲೈವ್. ಕಾಂ/ಶಿವೊ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾಜಿ ಮುಖ್ಯಮಂತ್ರಿ ಮತ್ತು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧವಾಗಿ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಿಂದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿ.ಟಿ.ರವಿ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಬಹಿರಂಗ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಎನ್.ರವಿಕುಮಾರ್, ರೇಖಾ ರಂಗನಾಥ್, ಯಮುನಾ ರಂಗೇಗೌಡ, ಸೂಡೂರು ಶಿವಣ್ಣ, ವಿಜಯಲಕ್ಷ್ಮಿ ಪಾಟೀಲ್‌, ಸೌಗಂಧಿಕಾ, ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು,ಮಹಾನಗರ ಪಾಲಿಕೆ ಸದಸ್ಯರು,ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿದ್ದರು.

Spread the love

Soori

ಶಿವಮೊಗ್ಗ ಜಿಲ್ಲಾ ಸುದ್ದಿಗಳನ್ನ ಪ್ರಪಂಚಕ್ಕೆ ತಿಳಿಸುವ ಪ್ರಯತ್ನ ಸುದ್ದಿಲೈವ್ ನದು. ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗಿಂತ ವಿಭಿನ್ನ ಪ್ರಯತ್ನದಲ್ಲಿ ಪರ್ಯಾಯ ಮಾಧ್ಯಮವಾಗಿ ಪ್ರಕಟಿಸುವ ಸಣ್ಣಪ್ರಯತ್ನವೂ ಹೌದು! ದಯಮಾಡಿ ಹರಸಿ,ಬೆಂಬಲಿಸಿ

Related Articles

Leave a Reply

Your email address will not be published.

Back to top button